Sunday, June 21, 2026
spot_imgspot_img
spot_imgspot_img

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

- Advertisement -
- Advertisement -

ಮಂಗಳೂರು: ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ.

ಅಮೆರಿಕದ  ಟೆಕ್ಸಾಸ್‍ನಿಂದ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಪಿಕ್ಸಿಸ್ ಪಯನೀರ್ ಎಂಬ ಹಡಗು ಮಂಗಳೂರಿನ ನವಮಂಗಳೂರು ಬಂದರಿಗೆ ಆಗಮಿಸಿದೆ. ಏಜೀಸ್ ಕಂಪನಿಗೆ ಎಲ್‍ಪಿಜಿಯನ್ನು ಈ ಹಡಗು ತಂದಿದೆ.

ಮಾ.14 ರಂದು ಅಮೇರಿಕದಿಂದ ಪಿಕ್ಸಿಸ್ ಪಯಿನೀರ್ ಕಾರ್ಗೋ ಹಡಗು ಹೊರಟಿತ್ತು. ಇಂದು ಮಂಗಳೂರಿಗೆ ತಲುಪಿದ್ದು, ರಾಜ್ಯದಲ್ಲಿ ತಲೆದೂರಿರುವ ಸಿಲಿಂಡರ್ ಅಭಾವ ಪರಿಹಾರ ಆಗುವ ಭರವಸೆ ಇದೆ ಎಂದು ತಿಳಿದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!