Friday, May 3, 2024
spot_imgspot_img
spot_imgspot_img

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ | ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

- Advertisement -G L Acharya panikkar
- Advertisement -

ಮಂಗಳೂರು: ಇದೇ ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.

ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತರೂ ಆಗಿರುವ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ.

ನಿಷೇಧಿತ ವಲಯದಲ್ಲಿ ಯವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು / ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆ ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಯಾವುದೇ ಕ್ಷಾರಕ (ಆಸಿಡ್) ಸ್ಪೋಟಕ ವಸ್ತುಗಳ ಸರಬರಾಜು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪುಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಇರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತರು, ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!