Thursday, June 18, 2026
spot_imgspot_img
spot_imgspot_img

ಮಾಣಿ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿ; ಆರು ಮಂದಿ ಗಂಭೀರ..!

- Advertisement -
- Advertisement -

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಾಣಿ ಸಮೀಪದ ‌ಕೊಡಾಜೆ ಎಂಬಲ್ಲಿ ನಡೆದಿದೆ.

ಮಂಗಳೂರು ‌ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನಿಗೆ ಕಾರನ್ನು ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಎದುರುಗಡೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿ ನಿಂತಿದೆ. ಘಟನೆಯಿಂದ ಒಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ವಿವರ ಸಿಕ್ಕಿಲ್ಲ.ಆರು ಮಂದಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರಿನಲ್ಲಿ ಮೂವರು ಮಹಿಳೆಯರು ಹೊರೆಕ್ಕೆಸಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕಾರು ಹಾಗೂ ಸ್ಕೂಟರ್ ಸಂಪೂರ್ಣ ‌ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!