- Advertisement -
- Advertisement -
ಬೆಂಗಳೂರು: ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಬೆನ್ನಲ್ಲೆ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಸಂಬಂಧ ಮಾಹಿತಿ ನೀಡಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅವರು ದೊಡ್ಮನೆ ಸದಸ್ಯರು. ಈ ಸಂಬಂಧ ದೆಹಲಿಯಲ್ಲಿ ಉನ್ನತ ಮಟ್ಟದ ಮಾತುಕತೆ ಅಗತ್ಯವಾಗಿದೆ.

ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅವರನ್ನು ಅತ್ಯಂತ ಗೌರವದಿಂದ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಲಾಗುವುದು ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಯೇ ಪಕ್ಷದ ಗುರಿಯಾಗಿದೆ. ಇತರ ಯಾವುದೇ ಪಕ್ಷವನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿಲ್ಲ. ಬದಲಾಗಿ ಪಕ್ಷ ಸಂಘಟನೆಯತ್ತ ಗಮನ ಹರಿಸಲಾಗುತ್ತಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.


- Advertisement -