Saturday, August 8, 2026
spot_imgspot_img
spot_imgspot_img

ಮಡಿಕೇರಿ: ಆಟವಾಡ್ತಿದ್ದ ವೇಳೆ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

- Advertisement -
- Advertisement -

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4 ವರ್ಷದ ಮಗು ಮೃತಪಟ್ಟಿದೆ.

ಮೃತ ಮಗುವನ್ನು ಅಪೂರ್ವ ಎಂದು ಗುರುತಿಸಲಾಗಿದೆ. ಈಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಈ ದುರ್ಘಟನೆ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನ ಉಳಿಸಲು ಸಾಧ್ಯವಾಗಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ದುರ್ಘಟನೆಯಿಂದ ಬಸವನಹಳ್ಳಿ ಹಾಡಿಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ಶಾಲಾ ಆವರಣದ ಸುರಕ್ಷತೆ ಕುರಿತು ಪ್ರಶ್ನೆಗಳು ಕೇಳಿಬರುತ್ತಿವೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!