Friday, April 19, 2024
spot_imgspot_img
spot_imgspot_img

ಮಡಿಕೇರಿ: ಸಿಲಿಂಡರ್ ಸ್ಫೋಟ ಮೂರು ಮನೆಗಳು ಜಖಂ- ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

- Advertisement -G L Acharya panikkar
- Advertisement -

ಮಡಿಕೇರಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಗಳು ಸಂಪೂರ್ಣ ಜಖಂಗೊಂಡಿದ್ದು, ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ದುರ್ಘಟನೆ ಮಡಿಕೇರಿ ತಾಲೂಕಿನ ಮೂರ್ನಾಡಿನಲ್ಲಿ ನಡೆದಿದೆ.

ಮಂದಣ್ಣ ಎಂಬುವರಿಗೆ ಸೇರಿದ ಲೈನ್ ಮನೆಯಲ್ಲಿ ಕಾಫಿ ತೋಟದ ಕೂಲಿ ಕಾರ್ಮಿಕರು ವಾಸವಾಗಿದ್ದರು. ಸೋಮಯ್ಯ, ವಿಜಯ ಮತ್ತು ರಶ್ಮಿ ಎಂಬುವರು ಲೈನ್ ಮನೆಯಲ್ಲಿ ವಾಸಿಸುತ್ತಿದ್ದರು. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ಮನೆಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಕೂಲಿ ಕಾರ್ಮಿಕರು ತೋಟದ ಕೆಲಸಕ್ಕೆ ಹೋಗಿದ್ದ ಸಂದರ್ಭ ಈ ದುರ್ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಅದರೆ ಮನೆಯಲ್ಲಿ ಇದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾಗೂ ಮಕ್ಕಳ ಪುಸ್ತಕಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟ ಭಸ್ಮವಾಗಿದೆ.

ಕೂಲಿ ಕಾರ್ಮಿಕರು ಸಣ್ಣ ಫೈನಾನ್ಸ್ ಗಳಲ್ಲಿ ಸಾಲ ಪಡೆದು ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಕೊಂಡು ಕೊಂಡಿದ್ದರು. ಬೆಂಕಿ ಜ್ವಾಲೆಗೆ ವಸ್ತುಗಳು ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!