




ಮಡಿಕೇರಿ: ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಪೂರ್ಣಿಮಾ ಬಸ್ ಇಂದು ಮುಂಜಾನೆ ಮಡಿಕೇರಿ ಘಾಟ್ ಸೆಕ್ಷನ್‌ನಲ್ಲಿ ಅಪಘಾತಕ್ಕೀಡಾಗಿದೆ. ಬಸ್ ಚಾಲಕನಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.
ತನಗೆ ಹೃದಯಘಾತವಾಗುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾನೆ. ಹೃದಯಾಘಾತ ತೀವ್ರವಾಗುತ್ತಿದ್ದಂತೆ ಚಾಲಕ ಚರಂಡಿಯ ಬಳಿ ಬಸ್ ನಿಲ್ಲಿಸಿದ್ದಾನೆ, ಈ ವೇಳೆ ಬಸ್ ಕೊಂಚ ವಾಲಿಕೊಂಡಿದೆ, ಆದಾಗ್ಯೂ ಪ್ರಯಾಣಿಕರ ಜೀವ ಉಳಿಸಿದ್ದಾನೆ.
ಬಸ್ ಚಾಲಕ ಮೃತಪಟ್ಟಿದ್ದು, ಬೆಂಗಳೂರು ಮೂಲದ ಶಿವಕುಮಾರ್(50) ಎಂದು ಗುರುತಿಸಲಾಗಿದೆ
ಸ್ಥಳಕ್ಕೆ ಮಡಿಕೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಬದಿಯಲ್ಲಿ ಬಸ್ ವಾಲಿಕೊಂಡು ನಿಂತ ಕಾರಣ ಹೆದ್ದಾರಿಯಲ್ಲಿ ಇತರ ವಾಹನ ಸಂಚಾರಕ್ಕೆ ಯಾವುದೇ ಅಡೆ ತಡೆ ಆಗಿಲ್ಲ. ಇತ್ತ ಘಟನೆಯಿಂದ ಆತಂಕಗೊಂಡ ಪ್ರಯಾಣಿಕರಿಗೆ ಬೇರೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ








