- Advertisement -
- Advertisement -





ಮಡಿಕೇರಿ: ಕೊಡಗಿನ ಸೋಮವಾರಪೇಟೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಶುಕ್ರವಾರ(ಸೆ.04) ತಡರಾತ್ರಿ ನಡೆದಿದೆ.
ಶುಕ್ರವಾರ ತಡರಾತ್ರಿ ಸುಮಾರು 2.05ರ ವೇಳೆಗೆ ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಎಟಿಎಂ ಒಳಗೆ ನುಗ್ಗಿದ್ದಾರೆ. ಬಳಿಕ ಸಣ್ಣ ಕಬ್ಬಿಣದ ಸಲಾಕೆಯ ಸಹಾಯದಿಂದ ಎಟಿಎಂ ಯಂತ್ರದ ಮೇಲಿನ ಕವಚವನ್ನು ಮೀಟಿ ಕಳಚಿದ್ದಾರೆ.
ಎಟಿಎಂನ ಮತ್ತೊಂದು ಪದರವನ್ನು ತೆರೆಯಲು ಯತ್ನಿಸುತ್ತಿದ್ದ ವೇಳೆ, ಯಾರೋ ಬಂದಂತೆ ಭಾಸವಾದ ಹಿನ್ನೆಲೆ ಆತಂಕಗೊಂಡ ಖದೀಮರು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳ್ಳರು ಎಟಿಎಂ ಒಡೆಯಲು ಯತ್ನಿಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -








