Sunday, May 5, 2024
spot_imgspot_img
spot_imgspot_img

ಶಂಕಿತ ಇಲಿ ಜ್ವರಕ್ಕೆ ಯುವಕ ಬಲಿ..!!

- Advertisement -G L Acharya panikkar
- Advertisement -

ಇಲಿ ಜ್ಚರಕ್ಕೆ ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

ಆನೆಪಾರೆ ನಿವಾಸಿ ಕೂಲಿ ಕಾರ್ಮಿಕರಾದ ಬಾಲನ್ ಅವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.

ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ‌ ಆತಂಕ ಸೃಷ್ಟಿಯಾಗಿದೆ.

ಇಲಿ ಜ್ವರ ಹೇಗೆ ಹರಡುತ್ತೆ?
ತಜ್ಞ ವೈದ್ಯರು ಹೇಳುವಂತೆ ಇದೊಂದು ರೀತಿಯ ಬ್ಯಾಕ್ಟೀರಿಯಾ ಸೋಂಕು. ಇಲಿ ಕಚ್ಚಿ ಮಾತ್ರ ನಿಮಗೆ ಜ್ವರ ಬರಬೇಕು ಎಂದೇನಿಲ್ಲ. ಅದರ ಎಂಜಲು, ಅದರ ಮೂತ್ರ, ಮಲ ಅಥವಾ ಇಲಿಯ ದೇಹದ ಯಾವುದೇ ದ್ರವ ನಿಮ್ಮ ಚರ್ಮಕ್ಕೆ ತಾಗಿದರೆ ನಿಮಗೆ ಸೋಂಕು ಉಂಟಾಗಬಹುದು.

- Advertisement -

Related news

error: Content is protected !!