Sunday, June 7, 2026
spot_imgspot_img
spot_imgspot_img

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶ

- Advertisement -
- Advertisement -

ಸೌಜನ್ಯ ಹೆತ್ತವರು ಸಲ್ಲಿಸಿದ ಮರುತನಿಖೆ ಅರ್ಜಿಗಳು ವಜಾ

ಸಂತೋಷ್ ಕುಮಾರ್ ನಿರ್ದೋಷಿ ಆದೇಶ ಎತ್ತಿ ಹಿಡಿದ ಕೋರ್ಟ್

ಕಳೆದ ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಪಾಂಗಾಳ ಸಮೀಪ ನಡೆದಿದ್ದ ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಪಡಿಸಿದೆ.

ಪ್ರಕರಣದ ಮರುತನಿಖೆ ನಡೆಸುವಂತೆ ಸೌಜನ್ಯ ಪೋಷಕರು ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿ ಆದೇಶೀಸಿತ್ತು.

ಇಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ಹೊರಬಿದ್ದಿದ್ದು, ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ನ್ಯಾ.ಜೆ.ಎಂ.ಖಾಜಿ ಅವರಿದ್ದ ಪೀಠವು ಮರುತನಿಖೆ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.

ತನ್ನದಲ್ಲದ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿರುವ ಸಂತೋಷ್ ರಾವ್ ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿದ್ದಾಗಿ ತಿಳಿದುಬಂದಿದೆ. ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಸೆಷನ್ಸ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

- Advertisement -

Related news

error: Content is protected !!