


ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಕಡೇಶಿವಾಲಯದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಕುಸುಮೋಧರ ಡಿ ಶೆಟ್ಟಿ ನಡುಮೊಗರುಗುತ್ತು ಭವಾನಿ ಸಮೂಹ ಸಂಸ್ಥೆ ಮುಂಬೈ ಇವರ ಪದವಿ ಸ್ವೀಕಾರ ಕಾರ್ಯಕ್ರಮವು ಗಣ್ಯರ ಉಪಸ್ಥಿತಿಯಲ್ಲಿ ಜುಲೈ14.7.2025 ಸೋಮವಾರ ಪೂರ್ವಾಹ್ನ 11.00 ಗಂಟೆಗೆ ನಡೆಯಲಿದೆ.
ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಕಡೇಶಿವಾಲಯ ಶ್ರೀ ಕ್ಷೇತ್ರದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದಂತೆ ದೇವಾಲಯದ ಜೀರ್ಣೋದ್ಧಾರ ಪ್ರಕ್ರಿಯೆಯನ್ನು ಭಕ್ತಾದಿಗಳ ಸಹಕಾರದೊಂದಿಗೆ ಆರಂಭಿಸಲು ನಿರ್ಧರಿಸಲಾಗಿದೆ. ಕುಸುಮೋಧರ. ಡಿ. ಶೆಟ್ಟಿ ನಡುಮೊಗರುಗುತ್ತು, ಭವಾನಿ ಸಮೂಹ ಸಂಸ್ಥೆ ಮುಂಬೈ ಇವರನ್ನು ಸರ್ವಾನುಮತದಿಂದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನಮ್ ಒಡಿಯೂರು, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
ಅದೇ ದಿನ ವಿಶೇಷ ಸೇವೆ 1000 ಅಪ್ಪದ ಸೇವೆ ನಡೆಯಲಿದೆ.
ಭಕ್ತಾದಿಗಳು ಆಗಮಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ ಕಡೇಶಿವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.