Saturday, June 20, 2026
spot_imgspot_img
spot_imgspot_img

ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಮಹೇಶ್ ಶೆಟ್ಟಿ ತಿಮರೋಡಿ ಬಂಧನ

- Advertisement -
- Advertisement -

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ, ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BNS 196(1),352,353(2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತಿಮರೋಡಿಗೆ ಬ್ರಹ್ಮಾವರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. 2 ಬಾರಿ ನೋಟಿಸ್‌ ಜಾರಿಮಾಡಿದ್ದರೂ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಲ್ಲಿ ಇಂದು ಬೆಳಗ್ಗೆ ವಶಕ್ಕೆ ಪಡೆಯಲಾಗಿತ್ತು. ಕೆಲಕಾಲ ವಿಚಾರಣೆ ಬಳಿಕ ಬಂಧಿಸಿದ್ದಾರೆ.

- Advertisement -

Related news

error: Content is protected !!