


ಮಂಗಳೂರು: ಬಿಜೆಪಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಆ.20 ರಂದು ನೋಟೀಸ್ ನೀಡಲು ಬಂದ ಪೊಲೀಸರ ಜತೆ ತಿಮರೋಡಿಯಲ್ಲಿ ಅವರ ಪರ ಮಂದಿ ಅನುಚಿತ ವರ್ತನೆ ತೋರಿದ್ದರು. ಈ ಹಿನ್ನೆಲೆಯಲ್ಲಿ ಆ.21 ರಂದು ಉಡುಪಿ ಜಿಲ್ಲಾ ಎಡಿಷನ್ ಎಸ್ಪಿ ಸುಧಾಕರ್ ಹೆಗ್ಡೆ ನೇತೃತ್ವದಲ್ಲಿ 9 ಪೊಲೀಸ್ ವಾಹನದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಆಗಮಿಸಿದ್ದಾರೆ. ಈ ಮಧ್ಯೆ ವಾದ ವಿವಾದಗಳು ನಡೆಯುತ್ತಿದ್ದು ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ.
ಆ.16 ರಂದು ಫೇಸ್ ಬುಕ್ ಪೇಜ್ ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂದೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿರುವ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜೆಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಿಚಾರಣೆಗೆ ಹಾಜರಾಗದ ಹಿನ್ನೆಲೆ ವಶಕ್ಕೆ ಪಡೆದು ಬ್ರಹ್ಮವಾರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ.








