Sunday, September 20, 2026
spot_imgspot_img
spot_imgspot_img

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಪ್ರಕರಣ ,ಆಸ್ಪತ್ರೆ ವಿರುದ್ಧ ಕೇಸ್ ದಾಖಲಿಸುವಂತೆ ಆಗ್ರಹ-ಯಶ್ ಪಾಲ್ ಸುವರ್ಣ.

- Advertisement -
- Advertisement -

ಉಡುಪಿ:-ವೈದ್ಯರ ನಿರ್ಲಕ್ಷ್ಯ ದಿಂದ ಮೃತಪಟ್ಟ ಕಾಪು ಮೂಲದ ಮಹಿಳೆ  ಶ್ರೀಮತಿ ರಕ್ಷಾ  ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿ  ಉಡುಪಿಯ ಮಿಷನ್ ಅಸ್ಪತ್ರೆಯ ವಿರುದ್ಧ ಕೇಸ್ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. 

ತಲೆ ನೋವು ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ  ಅಸ್ವಸ್ಥಗೊಂಡು ಮಹಿಳೆ ಮೃತ ಪಟ್ಟಿದ್ದು ,ಇಬ್ಬರು ಎಳೆಯ ಮಕ್ಕಳನ್ನು ಅಗಲಿದ್ದಾರೆ.ಈ ಬಗ್ಗೆ ಸೂಕ್ತ ತನಿಖೆ ನಡೆಸಿ  ಮಿಶನ್ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.

ಕೊರೊನಾ ಮಹಾಮಾರಿಯ ಈ ಸಂದರ್ಭದಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ಜನ ಸಾಮಾನ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿರುವುದು ದುರದೃಷ್ಟಕರ. ಇಂತಹ ಪ್ರಕರಣಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!