- Advertisement -
- Advertisement -
ಬೆಂಗಳೂರು: ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ವತಿಯಿಂದ ಬೆಂಗಳೂರಿನ ಪಶುವೈದ್ಯ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಆಯೋಜಿಸಲಾದ 2026ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ರಾಜ್ಯ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗಾಗಿ ವಿಟ್ಲದ ಡಾ. ಮೈತ್ರಿ ಭಟ್ ಅವರಿಗೆ ‘ಸಾವಿತ್ರಿಬಾಯಿ ಫುಲೆ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸಾಹಿತ್ಯ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಸಾಧನೆಯನ್ನು ಪರಿಗಣಿಸಿ ಡಾ. ಮೈತ್ರಿ ಭಟ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಟ್ಲ ನಿವಾಸಿಯಾಗಿರುವ ಡಾ. ಮೈತ್ರಿ ಭಟ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿವಿಧ ಸಾಹಿತ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ. ಇವರು ವಿಟ್ಲದ ರವಿಶಂಕರ ಕುಳಮರ್ವ ಅವರ ಪತ್ನಿಯಾಗಿದ್ದಾರೆ.
- Advertisement -








