Thursday, April 18, 2024
spot_imgspot_img
spot_imgspot_img

ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಕಲ್ಲಡ್ಕ ಕ್ಲಸ್ಟರಿನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೆಟಿಲ್ಡಾ ಉದ್ಘಾಟಿಸಿ ತರಬೇತಿಯ ಅವಶ್ಯಕತೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಸಂಪನ್ಮೂಲ ವ್ಯಕ್ತಿ ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶ್ರೀಯುತ ತಿಮ್ಮಪ್ಪ ನಾಯ್ಕ ರವರು ಶಾಲಾಭಿವೃದ್ದಿ ಸಮಿತಿಯ ಸದಸ್ಯರ ಕಾರ್ಯ ಹಾಗೂ ಕರ್ತವ್ಯ ಮತ್ತು ಶಾಲಾಭಿವೃದ್ಧಿ ಸಮಿತಿಯ ರಚನೆಯ ಬಗ್ಗೆ ವಿಸ್ತಾರವಾಗಿ ಮನದಟ್ಟಾಗುವ ರೀತಿಯಲ್ಲಿ ವಿವರಿಸಿ.


ಇನ್ನೋರ್ವ ತರಬೇತುದಾರರಾದ 2020 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀಮತಿ ಸಂಗೀತ ಶರ್ಮ ರವರು ಶೈಕ್ಷಣಿಕವಾಗಿ ತಾಂತ್ರಿಕ ತೆಯ ಬಳಕೆ, ಹಾಗೂ ಎಸ್ ಡಿ ಎಂ ಸಿ ಯ ಕತ೯ವ್ಯದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.


ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಸಂಜೀವ ಮೂಲ್ಯ, ಉಪಾಧ್ಯಕ್ಷರಾದ ಶ್ರೀಮತಿ ವಿಜಯ ಶೇಖರ್ ಬಿ ,ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಸುನಿಲ್, ಶಾಲಾಭಿವೃದ್ದಿ ಸದಸ್ಯರು ಭಾಗವಹಿಸಿದರು. ಶಿಕ್ಷಕಿ ಶ್ರೀಮತಿ ಶಕುಂತಲ ಪ್ರಾರ್ಥಿಸಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅನುಷಾ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು.

- Advertisement -

Related news

error: Content is protected !!