Thursday, October 15, 2026
spot_imgspot_img
spot_imgspot_img

ಕೆಮಿಕಲ್ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – ಮೂವರು ಕಾರ್ಮಿಕರಿಗೆ ಗಂಭೀರ ಗಾಯ

- Advertisement -
- Advertisement -

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಇಚ್ಚಂಗೂರು-ವಡ್ಡರಪಾಳ್ಯ ರಸ್ತೆಯಲ್ಲಿನ ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ.

ಕೆಮಿಕಲ್ ಮಿಕ್ಸ್ ಮಾಡುತ್ತಿದ್ದ ವೇಳೆ ರಿಯಾಕ್ಟರ್ ಏಕಾಏಕಿ ಸ್ಫೋಟಗೊಂಡು ಕ್ಷಣಮಾತ್ರದಲ್ಲಿ ಕಾರ್ಖಾನೆಯೊಳಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದ ರಭಸಕ್ಕೆ ಕಿಟಕಿ, ಬಾಗಿಲುಗಳು ಪುಡಿಪುಡಿಯಾಗಿವೆ. ಕಾರ್ಖಾನೆಯೊಳಗಿನ ವಸ್ತುಗಳು ಛಿದ್ರಗೊಂಡಿದ್ದು, ಸ್ಫೋಟದ ಸದ್ದು ಸುತ್ತಮುತ್ತಲಿನ ಗ್ರಾಮಸ್ಥರನ್ನೇ ಬೆಚ್ಚಿಬೀಳಿಸಿದೆ. ಸ್ಫೋಟದ ಅಬ್ಬರಕ್ಕೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಸ್ಸಾಂ ಮೂಲದ ಫೀರ್ ಮೊಹಮ್ಮದ್, ತಮಿಳುನಾಡು ಮೂಲದ ವಿನೀತ್ ಹಾಗೂ ವರುಣ್ ಟಿ. ಜಯನ್ ಗಾಯಗೊಂಡ ಕಾರ್ಮಿಕರಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಕೆಮಿಕಲ್‌ನಿಂದಾಗಿ ಸುಟ್ಟ ಗಾಯಗಳಾಗಿದ್ದು, ನೋವಿನಿಂದ ಕಾರ್ಮಿಕರು ನರಳಾಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!