Saturday, July 25, 2026
spot_imgspot_img
spot_imgspot_img

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್ ಶಾಂತಿ ಪುರಸ್ಕೃತ ದಿಟ್ಟ ಹೋರಾಟಗಾರ್ತಿ ಮಲಾಲಾ

- Advertisement -
- Advertisement -

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್‌ಝೈ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಈ ಬಗ್ಗೆ ಟ್ವೀಟ್ ಮಾಡಿರುವ ಇವರಿಗೆ ಶುಭಾಶಯಗಳ ಸುರಿಮಳೆಯೇ ಹರಿದಿದೆ.

ಬ್ರಿಟನ್ ನ ಬರ್ಮಿಂಗ್’ಹ್ಯಾಮ್’ನಲ್ಲಿ ನಾನು ಮತ್ತು ಅಸ್ಸರ್ ಮದುವೆಯಾಗಿದ್ದೇವೆ ಎಂದು ಮಲಾಲಾ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಕೂಡ ಶೇರ್ ಮಾಡಿಕೊಂಡಿದ್ದಾರೆ.

ತಮ್ಮ ನಿಖಾ ಸಮಾರಂಭದ ಬಗ್ಗೆ ಟ್ವೀಟ್ ಮಾಡಿರುವ ಮಲಾಲಾ, ಇಂದು ನನ್ನ ಬದುಕಲ್ಲಿ ಅತ್ಯಮೂಲ್ಯ ದಿನವಾಗಿದೆ. ಅಸ್ಸರ್ ಮತ್ತು ನಾನು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದೇವೆ. ಬರ್ಮಿಂಗ್‌ಹ್ಯಾಂನಲ್ಲಿ ನಾವು ನಮ್ಮ ಕುಟುಂಬದವರ ಸಮ್ಮುಖದಲ್ಲಿ ಮದುವೆ ಮಾಡಿಕೊಂಡಿದ್ದೇವೆ. ನಮಗೆ ನಿಮ್ಮೆಲ್ಲರ ಆಶೀರ್ವಾದ ಬೇಕು. ನಾವು ಹೊಸಜೀವನ ಪ್ರಾರಂಭ ಮಾಡಲು ಉತ್ಸುಕರಾಗಿದ್ದೇವೆ. ಇದೊಂದು ರೋಮಾಂಚನಕಾರಿ ಸಂದರ್ಭವೆಂದು ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!