Sunday, July 26, 2026
spot_imgspot_img
spot_imgspot_img

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ

- Advertisement -
- Advertisement -

ನಿಯಮ ಉಲ್ಲಂಘಿಸಿದ್ರೆ 23.95 ಕೋಟಿ ರೂ. ದಂಡ

16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ (ಸುಮಾರು 23.95 ಕೋಟಿ ಭಾರತೀಯ ರೂಪಾಯಿಗಳು) ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ ಹೇರುವ ಮೂಲಕ ಮಕ್ಕಳ ಸೋಷಿಯಲ್ ಮೀಡಿಯಾ ವ್ಯಸನವನ್ನು ಕಡಿಮೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮಾನುಸಾರ 16 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್ ಹಾಗೂ ಯೂಟ್ಯೂಬ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾಗಳಲ್ಲಿ ಖಾತೆ ತೆರೆಯಲು ಅವಕಾಶವಿಲ್ಲ.

ಸೋಶಿಯಲ್ ಮೀಡಿಯಾ ಕಂಪನಿಗಳು ಬಳಕೆದಾರರ ವಯಸ್ಸು ಪರಿಶೀಲಿಸುವ ವ್ಯವಸ್ಥೆ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.

ಮಕ್ಕಳನ್ನು ಹಾನಿಕಾರಕ ವಿಷಯಗಳು, ಸೈಬರ್ ಬುಲ್ಲಿಂಗ್ ಹಾಗೂ ಅತಿಯಾದ ಸೋಶಿಯಲ್ ಮೀಡಿಯಾ ಬಳಕೆಯಿಂದ ರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಈ ನಿಯಮ ಮಕ್ಕಳಿಗೆ ಇಂಟರ್‌ನೆಟ್ ಅಥವಾ ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ತಡೆಯುವುದಿಲ್ಲ ಎಂದು ಮಲೇಷ್ಯಾ ತಿಳಿಸಿದೆ.

- Advertisement -

Related news

error: Content is protected !!