Sunday, June 29, 2025
spot_imgspot_img
spot_imgspot_img

ಮಲ್ಪೆ: ಮೀನುಗಾರಿಕೆ ಇಲಾಖೆಯ ಮೀಟಿಂಗ್ ರೂಮ್‌ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ..!

- Advertisement -
- Advertisement -

ಮಲ್ಪೆ: ಮಲ್ಪೆ ಮೀನುಗಾರಿಕೆ ಇಲಾಖೆಯ ಕಚೇರಿಯ ಮೀಟಿಂಗ್ ರೂಮ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿ, ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.

ಮಂಗಳವಾರ ಬೆಳಗ್ಗೆ ಕಚೇರಿ ತೆರೆದಾಗಲೇ ಈ ಘಟನೆ ಬೆಳಕಿಗೆ ಬಂದಿದೆ. ಉರಿಯುತ್ತಿದ್ದ ಅವಶೇಷಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನಂದಿಸಿದ್ದಾರೆ. ರೂಮ್‌ನೊಳಗಿದ್ದ ಹವಾನಿಯಂತ್ರಕ ಯಂತ್ರ ಸ್ಫೋಟಗೊಂಡಿದ್ದು, ರೂಮ್‌ನ ಒಳಗಿದ್ದ ಎಲ್ಲ ಕಡತಗಳು ಸುಟ್ಟು ಭಸ್ಮವಾಗಿದೆ. ಫ್ಯಾನ್, ಚಯರ್, ಟೇಬಲ್, ಲೈಫ್‌ಬಾಯ್, ಲೈಫ್ಜಾಕೆಟ್, ಸೇರಿದಂತೆ ಪಾರ್ಟಿಶನ್ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಬೆಂಕಿ ಇತರ ಕೋಣೆಯನ್ನು ಆವರಿಸಿದರೆ ಈ ಕಟ್ಟಡ ಪೂರ್ತಿ ಬೆಂಕಿಗಾಹುತಿಯಾಗುತ್ತಿತ್ತು ಎಂದು ಹೇಳಲಾಗಿದೆ.

ದಟ್ಟವಾದ ಹೊಗೆ ಕಟ್ಟಡದ ಎಲ್ಲ ಕೋಣೆಗಳನ್ನು ಆವರಿಸಿದ್ದು, ಗೋಡೆ ಕಪ್ಪು ಬಣ್ಣಕ್ಕೆ ತಿರುಗಿದೆ. ಘಟನೆಯಿಂದಾಗಿ ಸುಮಾರು 4 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!