- Advertisement -
- Advertisement -





ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು(ಸೆ.07) ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮನೆಯೊಂದಕ್ಕೆ ಹೋಗುವ ಕಾಲುದಾರಿಯಲ್ಲಿ ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಹೆಣ್ಣು ಮಗು ಕಂಡುಬಂದಿದ್ದು, ಗಮನಿಸಿದ ಸ್ಥಳೀಯರು ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಮಗುವಿನ ಹೃದಯ ಬಡಿತ ಇರುವುದನ್ನು ಖಚಿತಪಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಲ್ಪೆ ಪೊಲೀಸರು ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮಗವನ್ನು ಎಸೆದಿರುವವರ ಕುರಿತು ಮಾಹಿತಿ ಕಳೆ ಹಾಕುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








