Tuesday, April 30, 2024
spot_imgspot_img
spot_imgspot_img

ಮಲ್ಪೆ: ಬಾಡಿಗೆ ಇದೆ ಎಂದು ಹೇಳಿ ಹೋದ ಆಟೋ ಚಾಲಕ ನಾಪತ್ತೆ ; ಸಂಶಯಾಸ್ಪದ ರೀತಿಯಲ್ಲಿ ಸಾವು..!

- Advertisement -G L Acharya panikkar
- Advertisement -

ಮಲ್ಪೆ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಳ್ಳೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.

ಮೃತಪಟ್ಟ ಆಟೋ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಎಂದು ಗುರುತಿಸಲಾಗಿದೆ.

ಇವರು ಮಾ.27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ ಮನೆಗೆ ಬಾರದೆ, ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಅವರ ಶವ ಉಳ್ಳೂರು ಗ್ರಾಮದ ಮಾಯಾಡಿ ಎಂಬಲ್ಲಿ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಫೈಜಲ್ ಅವರು ಸುವರ್ಣ ನದಿಯ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!