Tuesday, June 23, 2026
spot_imgspot_img
spot_imgspot_img

ಮಮತಾ ಬ್ಯಾನರ್ಜಿ ಗಾಯಗೊಂಡ ಪ್ರಕರಣ- ಪೊಲೀಸ್ ವರಿಷ್ಠಾಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ!

- Advertisement -
- Advertisement -

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಭದ್ರತಾ ನಿರ್ದೇಶಕ ವಿವೇಕ್ ಸಹಯ್ ಮತ್ತು ಪುರ್ಬಾ ಮೆದಿನಿಪುರದ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಪ್ರಕಾಶ್ ರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.

ಜಿಲ್ಲಾಧಿಕಾರಿ ವಿಭು ಗೋಯೆಲ್ ಅವರನ್ನು ಕೂಡ ಹುದ್ದೆಯಿಂದ ತೆರವುಗೊಳಿಸಲಾಗಿದ್ದು, ಚುನಾವಣೇತರ ಹುದ್ದೆಗೆ ವರ್ಗಾಯಿಸಲಾಗಿದೆ ಎಂದು ಆಯೋಗ ಹೇಳಿದೆ.

ಮಾರ್ಚ್ 10 ರಂದು ನಡೆದ ಘಟನೆಯಲ್ಲಿ‌ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದರು. ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ವರದಿ ಮತ್ತು ವಿಶೇಷ ಸಾಮಾನ್ಯ ವೀಕ್ಷಕರಾದ ಅಜಯ್ ನಾಯಕ್ ಮತ್ತು ವಿವೇಕ್ ಡ್ಯೂಬ್ ಅವರ ಜಂಟಿ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ‌.

- Advertisement -

Related news

error: Content is protected !!