Tuesday, July 28, 2026
spot_imgspot_img
spot_imgspot_img

ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

- Advertisement -
- Advertisement -

ಶಂಕರನಾರಾಯಣ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶಗಳಿಸಬಹುದೆಂಬ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ.

ವಿಶ್ವನಾಥ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಕುರಿತ ಜಾಹೀರಾತನ್ನು ನಂಬಿ, ಆರೋಪಿಗಳು ತಿಳಿಸಿದ ಖಾತೆಗೆ ಒಟ್ಟು 13,11,258ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಆದರೆ ಆರೋಪಿಗಳು ಷೇರನ್ನು ಖರೀದಿಸಲು ಕಳುಹಿಸಿದ ಹಣವಾಗಲೀ ಲಾಭಾಂಶವಾಗಲಿ ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!