Wednesday, July 2, 2025
spot_imgspot_img
spot_imgspot_img

ನೀರಿನ ಟ್ಯಾಂಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಡ ವ್ಯಕ್ತಿ ದಾಸರ್ (27) ಎಂದು ಗುರುತಿಸಲಾಗಿದೆ.

ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಟ್ಯಾಂಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‌ನ್ನು ಜನ ಪರಿಶೀಲಿಸಿದಾಗ ದಾಸರ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ.

- Advertisement -

Related news

error: Content is protected !!