Monday, June 15, 2026
spot_imgspot_img
spot_imgspot_img

ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಸರ್ಕಾರಿ ಬಸ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಶ್ವನಾಥ ಶಂಕರಯ್ಯ (38) ಎಂದು ಗುರುತಿಸಲಾಗಿದೆ.

ಚಲಿಸುತ್ತಿದ್ದ ಬಸ್ ಕೆಳಗೆ ಆತ್ಮಹತ್ಯೆ ಮಾಡಿಕೊಂಡ‌ ವ್ಯಕ್ತಿ. ಬಸ್‌ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್‌ ಎಸೆದು ಏಕಾಏಕಿ ಬಸ್‌ ಚಕ್ರದ ಕೆಳಗೆ ಬಿದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಶ್ವನಾಥ ಮೂಲತಃ ಹಾಸನ‌ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದವರು. ಬಸ್‌ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಸ್ಥರ ಮೊಬೈಲ್ ಸಂಖ್ಯೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!