Wednesday, May 1, 2024
spot_imgspot_img
spot_imgspot_img

ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಇಲ್ಲಿನ ನಾಯಂಡಹಳ್ಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನವೀನ್ ಕುಮಾರ್ (30) ಎಂದು ಗುರುತಿಸಲಾಗಿದೆ.

ತನ್ನ ಬೈಕ್‌ನ್ನು ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ಮಾಡಿ, ಫ್ಲೈಓವರ್‌ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ)ದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್‌, ಏ.12 ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಹತ್ಯೆ ಪ್ರಕರಣದ ಕುರಿತು ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!