



ಗಂಗಾವತಿ: ಬಾಲಕನಿಗೆ ಆಟೋರಿಕ್ಷಾ ನೀಡಿ ಅಪಘಾತದಲ್ಲಿ ಒಬ್ಬರ ಸಾವಿಗೆ ಕಾರಣನಾದ ಆಟೋರಿಕ್ಷಾ ಮಾಲೀಕನಿಗೆ ನ್ಯಾಯಾಲಯವು 1.41 ಕೋಟಿ ರೂ. ದಂಡ ವಿಧಿಸಿದ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.
17 ವರ್ಷದ ಬಾಲಕನೊಬ್ಬ ಆಟೋ ಚಲಾಯಿಸುವಾಗ ಅಪಘಾತ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ. ಹೀಗಾಗಿ ಬಾಲಕನಿಗೆ ಆಟೋ ನೀಡಿದ ಮಾಲೀಕನಿಗೆ ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯ ದಂಡ ವಿಧಿಸಿದೆ.
ಗಂಗಾವತಿ ನಿವಾಸಿ ರಾಜಶೇಖರ ಪಾಟೀಲ್, 2021ರ ಮಾರ್ಚ್ 10ರಂದು ಪಟ್ಟಣದ ಸ್ವಸ್ತಿಕ್ ಕಂಪ್ಯೂಟರ್ ಬಳಿ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತಿದ್ದರು. ಈ ವೇಳೆ ಬಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಆಟೋ ಓಡಿಸಿಕೊಂಡು ಬಂದು ಅವರಿಗೆ ಡಿಕ್ಕಿ ಹೊಡೆದಿದ್ದ. ತೀವ್ರ ಗಾಯಗೊಂಡಿದ್ದ ರಾಜಶೇಖರ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು. ಸೂಕ್ತ ಪರಿಹಾರ ನೀಡುವಂತೆ ಕೋರಿ ರಾಜಶೇಖರ ಪಾಟೀಲ್ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾ. ರಮೇಶ ಎಸ್.ಗಾಣಿಗೇರ ಅವರು, ಬಾಲಕನಿಗೆ ಆಟೋ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ದೊಡ್ಡ ಮೊತ್ತದ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ರಾಜಶೇಖರ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆಯೂ ಸೂಚಿಸಿದ್ದಾರೆ.