Thursday, March 28, 2024
spot_imgspot_img
spot_imgspot_img

ಮಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ಸ್ ಸೇವಿಸುತ್ತಿದ್ದರು; ಕಿಶೋರ್ ಶೆಟ್ಟಿ ಆರೋಪ!

- Advertisement -G L Acharya panikkar
- Advertisement -

ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಹೆಸರಿದೆ ಎಂದು ಹೇಳಲಾಗಿದೆ.

ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ಸ್ ಸೇವನೆ ಜತೆಗೆ ಅದರ ಸಾಗಾಟ ಮಾಡುತ್ತಿದ್ದರು ಎಂದು ಪ್ರಕರಣದ ಎ2 ಆರೋಪಿಯಾಗಿರುವ ಕಿಶೋರ್​ ಅಮನ್​ ಶೆಟ್ಟಿ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆಯಂತೆ, ಅವರ ರೂಮ್​ಗೆ ಅನುಶ್ರೀ ಡ್ರಗ್ಸ್​ ತರುತ್ತಿದ್ದರು. ಕಿಶೋರ್, ತರುಣ್ ಜೊತೆ ಸಾಕಷ್ಟು ಬಾರಿ ಅನುಶ್ರೀ ಕೂಡ ಡ್ರಗ್ಸ್​ ಸೇವನೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಆರೋಪಿ ಕಿಶೋರ್ ಶೆಟ್ಟಿಯನ್ನು ಉಲ್ಲೇಖಿಸಲಾಗಿದೆ. ‘ರಿಯಾಲಿಟಿ ಶೋನ ಕೊರಿಯೋಗ್ರಾಫರ್​ ಆಗಿದ್ದ ತರುಣ್​ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್​ ರೂಮ್​ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್​ಗೆ ಬರುವಾಗ ಅನುಶ್ರೀ ಡ್ರಗ್ಸ್​ ಖರೀದಿಸಿ ತರುತ್ತಿದ್ದರು. ನಮಗೆ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು.

ಅನುಶ್ರೀಗೆ ಡ್ರಗ್ಸ್ ಪೆಡ್ಲರ್​ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್​ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ.’ ಎಂದು ಚಾರ್ಜ್​ಶೀಟ್​​ನಲ್ಲಿ ಎ2 ಆರೋಪಿ ಕಿಶೋರ್​ ಶೆಟ್ಟಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

driving
- Advertisement -

Related news

error: Content is protected !!