Sunday, June 29, 2025
spot_imgspot_img
spot_imgspot_img

ಮಂಗಳೂರು: ವಿ.ಹಿಂ.ಪ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಕರಣ; ನಾಲ್ವರ ಬಂಧನ!

- Advertisement -
- Advertisement -

ಮಂಗಳೂರು: ದುರ್ಗವಾಹಿನಿ ಸಂಘಟನೆ ಮತ್ತು ವಿಶ್ವ ಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಸುಳ್ಯ ಕಸಬಾದ ಭವಾನಿ ಶಂಕರ್ (32), ನಗರದ ಬಜಾಲ್ ನೌಶಾದ್ (27), ಕಾವೂರಿನ ರವಿ ಎಲಿಯಾಸ್ ಟಿಕ್ಕಿ ರವಿ (38), ಮೂಡಬಿದ್ರೆ ಧರೆಗುಡ್ಡೆಯ ಜಯಕುಮಾರ್ (33) ಎಂದು ಗುರುತಿಸಲಾಗಿದೆ.

ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ಅವರ ನಿರ್ದೇಶನದಂತೆ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರಿರಾಮ್‌ಶಂಕರ್ ಮಾರ್ಗದರ್ಶನದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!