Saturday, April 20, 2024
spot_imgspot_img
spot_imgspot_img

ಮಂಗಳೂರು: ಕೆ.ಎಂ.ಎಫ್ ಉತ್ಪನ್ನಗಳ ಪ್ಯಾಕ್ ಮೇಲೆ ತುಳು ಲಿಪಿ ಮುದ್ರಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ!

- Advertisement -G L Acharya panikkar
- Advertisement -

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ.ಎಂ.ಎಫ್ ಸಂಸ್ಥೆಯಿಂದ ಸರಬರಾಜಾಗುವ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳು ಲಿಪಿಯ ವರ್ಣಮಾಲೆ ಮುದ್ರಿಸಿ ಹಂಚುವಂತೆ ದಕ್ಷಿಣ ಕನ್ನಡ ಹಾಲು ಉತ್ಪಾದಕ ಸಂಸ್ಥೆಯ ಅಧ್ಯಕ್ಷರಿಗೆ ಹಾಗೂ ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಮಾತನಾಡಿದ ಶಾಸಕರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಾತನಾಡುವ ತುಳುಭಾಷೆಗೆ ಐತಿಹಾಸಿಕ ಹಿನ್ನೆಲೆಯಿದ್ದು, ಅನೇಕ ಶಾಸನಗಳಲ್ಲಿ ತುಳುಲಿಪಿ ಕಂಡುಬಂದಿದೆ. ಭಾಷೆಯ ಉಳಿವು ಅದನ್ನು ಬಳಸಿದಾಗ ಮಾತ್ರ ಸಾಧ್ಯವಾಗುವುದು.

ಹೀಗಾಗಿ ಕೆ.ಎಂ.ಎಫ್ ಸಂಸ್ಥೆಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ತುಳುಲಿಪಿಯ ವರ್ಣಮಾಲೆಯ ಬಳಕೆಗೆ ಈಗಾಗಲೇ ಅಧ್ಯಕ್ಷರಿಗೆ ಮತ್ತು ವ್ಯವಸ್ಥಾಪನಾ ನಿರ್ದೇಶಕರಿಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಸಹಕಾರಿ ಸಚಿವರಿಗೂ ಇದರ ಕುರಿತು ಮಾಹಿತಿ ನೀಡಿ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದ್ದಾರೆ.

- Advertisement -

Related news

error: Content is protected !!