ಶುಕ್ರವಾರ ಸಂಜೆ ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ವ್ಯಕ್ತಿ.
ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಮಾರು 6 ಗಂಟೆಯ ವೇಳೆ ಮಂಚಿ ಮಸೀದಿಯ ಬಳಿ ಅಪಘಾತ ಸಂಭವಿಸಿದೆ.
ಮೃತ ಯುವಕ ಉನಾಯಿಸ್ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಪರಿಣಾಮವೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅತೀ ವೇಗದಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಉನಾಯಿಸ್ ಮಂಚಿ ಮಸೀದಿಯ ಬಳಿ ರಿಕ್ಷಾ ವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಡಿಕ್ಕಿಹೊಡೆದು ಬಳಿಕ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ.
ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಮತ್ತು ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.