- Advertisement -
- Advertisement -
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಾಡಜೆ ಎಂಬಲ್ಲಿನ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆಯ ವೇಳೆ ನಡೆದಿದೆ.
ನಾಡಾಜೆಯ ಸುಲೈಮಾನ್ ಎಂವವರ ಪುತ್ರ ರಶೀದ್ (23) ಆತ್ಮಹತ್ಯೆಗೆ ಶರಣಾದ ಯುವಕ. ಈತ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಣ್ಣವನಿಂದ ಸಾಲೆತ್ತೂರು ಕಟ್ಟತ್ತಿಲದಲ್ಲಿ ಅಜ್ಜಿಯ ಮನೆಯಲ್ಲಿ ವಾಸವಿದ್ದು ವ್ಯಾಸಂಗ ಮಾಡುತ್ತಿದ್ದ ರಶೀದ್ ವಿದ್ಯಾಭ್ಯಾಸ ಮುಗಿಸಿ ಎರಡು ವರ್ಷಗಳ ಹಿಂದೆ ನಾಡಾಜೆಗೆ ಬಂದಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತ ಕೊರೋನ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಹಿಂದೆ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.
- Advertisement -