Thursday, July 23, 2026
spot_imgspot_img
spot_imgspot_img

ಮಂಡ್ಯ: ಈಜಲು ಹೋಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಸಾವು

- Advertisement -
- Advertisement -

ಮಂಡ್ಯ: ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.

ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್ (15) ಮೃತ ಬಾಲಕ.

ದಳವಾಯಿ ಕೋಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಶಾಲೆಗೆ ರಜೆ ಇದ್ದ ಕಾರಣ ತನ್ನ 4 ಮಂದಿ ಸ್ನೇಹಿತರೊಂದಿಗೆ ಭಾನುವಾರ ಮಧ್ಯಾಹ್ನ ಈಜಾಡಲು ತೆರಳಿದ್ದ ಎನ್ನಲಾಗಿದೆ.

ಭಾನುವಾರ ಸಂಜೆಯವರೆಗೂ ಮನೆಗೆ ಬಾಲಕ ಹಿಂದಿರುಗಿದ ಕಾರಣ ಪೋಷಕರು ಬಾಲಕನ ಪತ್ತೆಗಾಗಿ ಶೋಧ ನಡೆಸಿದ್ದರು. ನಂದೀಪುರ ಗ್ರಾಮದ ರಾಜೇಗೌಡ ಅವರ ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಇಂದು ಬೆಳಿಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!