- Advertisement -
- Advertisement -



ಮಂಡ್ಯ: ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಮಗು ಅಸ್ವಸ್ಥಗೊಂಡಿದ್ದರಿಂದ ಪಾರಾಗಿದೆ ಎಂದು ತಿಳಿದುಬಂದಿದೆ.
ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ ಮಗುವಿತ್ತು. ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.
ಅಸ್ವಸ್ಥಗೊಂಡಿದ್ದ ಮಗು ಬದುಕುಳಿದಿದ್ದು, ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -








