Tuesday, March 2, 2021

ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಸಂಘಕ್ಕೆ ಅಭಿನಂದನೆ

ಮಂಡ್ಯ: ಕಳೆದ ಮಾರ್ಚ್ ನಲ್ಲಿ ಮಂಗಳೂರಿನಲ್ಲಿ ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆದ 35ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಸಂಘಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ವಿಶೇಷ ಸನ್ಮಾನ ನೀಡಿ ಅಭಿನಂದಿಸಲಾಯಿತು.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ, ಗಂಗಾಧರ ಕಲ್ಲಪಳ್ಳಿ ಅವರು ಗೌರವ ಸನ್ಮಾನ ಸ್ವೀಕರಿಸಿದರು.

ಮದ್ದೂರು ಶಾಸಕ ಡಿ.ಸಿ‌.ತಮ್ಮಣ್ಣ ಹಾಗು ವಿಜಯವಾಣಿ ಸಂಪಾದಕ ಚನ್ನೇಗೌಡ ಸನ್ಮಾನ ನೆರವೇರಿಸಿದರು. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ‌.ಲೋಕೇಶ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

MOST POPULAR

HOT NEWS

Related news

error: Content is protected !!