




ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಾಕೊಂಡ ಘಟನೆ ನಡೆದಿದೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಎಂಬುವವರು ರೆಡ್ ಹ್ಯಾಂಡ್‌ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
1 ಲಕ್ಷ ಪಡೆಯುವಾಗ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮನೋಹರ್, ಮಾಗನೂರು ಗ್ರಾಮದ ನಿವಾಸಿ ಶಂಕರ್ ಅವರ ಬಳಿ 8 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ದೂರುದಾರ ಹಾಗೂ ಎಡಿಎಲ್ ಆರ್ ನಡುವಿನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆಮಧ್ಯಪ್ರವೇಶ ಮಾಡದಿರಲು 8 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾನೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.








