Tuesday, April 23, 2024
spot_imgspot_img
spot_imgspot_img

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಬರೋಬ್ಬರಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ!

- Advertisement -G L Acharya panikkar
- Advertisement -

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಮುಲ್ಕಿ‌ ನಿವಾಸಿ, ಮುಂಬೈನ ಸಕಿ ನಾಕಾದಲ್ಲಿ ವಾಸಿಸುತ್ತಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿಯಾಗಿದ್ದಾನೆ. 2005ರ ಜನವರಿ 10ರಂದು ರಾತ್ರಿ ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿದ್ದು, ಈ ವೇಳೆ ಮನೆಯವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬಾಟಲಿಯಿಂದ ತಲೆಗೆ ತೀವ್ರವಾಗಿ ಹಲ್ಲೆ ನಡೆಸಿದ್ದರು. ಜೊತೆಗೆ ಜೀವ ಬೆದರಿಕೆಯನ್ನೂ ಹಾಕಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್‌ಐ ಧರ್ಮೇಂದ್ರ ಅವರು ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರು.‌ ಈ ವೇಳೆ ಚಂದ್ರಕಾಂತ ತಪ್ಪಿಸಿಕೊಂಡಿದ್ದ.

ಎಲ್‌. ಪಿ. ಸಿ (Long Pending Case) ಪ್ರಕರಣದ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ಇರುವುದಾಗಿ ಸುಳಿವು ಸಿಕ್ಕಿತ್ತು. ಈ ಮಾಹಿತಿಯನ್ನು ಆಧರಿಸಿ ಹೊರಟ ಪೊಲೀಸರಿಗೆ ಆರೋಪಿ ಮುಂಬೈನ ಅಂಧೇರಿಯಲ್ಲಿ ತನ್ನ ವೇಷ ಮರೆಸಿಕೊಂಡು ತರಕಾರಿ ವ್ಯಾಪಾರ ಮಾಡುತ್ತಿರುವುದು ಪತ್ತೆಯಾಗಿದೆ. ಈ ವೇಳೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್‌ ನಿರ್ದೇಶನದಲ್ಲಿ ಡಿಸಿಪಿಗಳಾದ ಹರಿರಾಮ್ ಶಂಕರ್, ದಿನೇಶ್ ಕುಮಾರ್ ಬಾರಿಕೆ, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ‌ ನಡೆದ ಕಾರ್ಯಾಚರಣೆಯಲ್ಲಿ ಬಜ್ಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ., ಪಿಎಸ್‌ಐ ಪೂವಪ್ಪ, ಎಎಸ್‌ಐ ರಾಮ ಪೂಜಾರಿ, ಸಿಬ್ಬಂದಿಗಳಾದ ರಶೀದ್ ಶೇಕ್, ಲಕ್ಷ್ಮಣ ಕಾಂಬ್ಳೆ, ಸಂತೋಷ ಡಿ.ಕೆ., ವಕೀಲ ಎನ್. ಲಮಾಣಿ ಭಾಗವಹಿಸಿದ್ದರು.

- Advertisement -

Related news

error: Content is protected !!