Wednesday, July 2, 2025
spot_imgspot_img
spot_imgspot_img

ಕರಾವಳಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್; ಇಬ್ಬರು ಬಲಿ!

- Advertisement -
- Advertisement -

ಮಂಗಳೂರು: ಕೊರೋನಾ ಮಾರಣಾಂತಿಕ ಸೋಂಕು ನಡುವೆ ಇದೀಗ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಬಹುದೊಡ್ಡ ಆತಂಕಕ್ಕೆ ಕಾರಣವಾಗಿದೆ. ಕರಾವಳಿ ಜಿಲ್ಲೆಯಲ್ಲೂ ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಈವರೆಗೆ 7 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢವಾಗಿದ್ದು, ಇನ್ನು ಉಡುಪಿಯಲ್ಲಿ 9 ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಏಳು ಮಂದಿ ಹೊರಜಿಲ್ಲೆಯ ರೋಗಿಗಳಾಗಿದ್ದು ಅನ್ಯ ಚಿಕಿತ್ಸೆಗೆ ಬಂದಾಗ ರೋಗ ಪತ್ತೆಯಾಗಿದ್ದು ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ.ಕ. ಜಿಲ್ಲಾಡಳಿತದ ಮಾಹಿತಿಯಂತೆ ಇಲ್ಲಿವರೆಗೆ 7 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ದೃಢವಾಗಿದ್ದು, ಒಬ್ಬರಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಈಗಾಗಲೇ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದಲ್ಲದೆ ಸ್ಥಳೀಯವಾಗಿ ಇಬ್ಬರಲ್ಲಿ ಪ್ರಕರಣ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕೊರೊನಾ ರೋಗಿಗಳ ಮೇಲೆ ವಿಶೇಷ ನಿಗಾ ವಹಿಸಿಕೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಉಡುಪಿ ಜಿಲ್ಲೆಯಲ್ಲಿ ಇಬ್ಬರಿಗೆ ಬ್ಲ್ಯಾಕ್‌ ಫಂಗಸ್‌ ಸೋಂಕು ಪತ್ತೆಯಾಗಿದೆ. ಸಂತೆಕಟ್ಟೆಯ 60 ವರ್ಷ ಪ್ರಾಯದ ಮಹಿಳೆ ಹಾಗೂ ಕಾಪು ನಂದಿಕೂರಿನ 45 ವರ್ಷದ ಪುರುಷರೋರ್ವರಿಗೆ ಸೋಂಕು ತಗಲಿದೆ. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಮಹಿಳೆ ವೆಂಟಿಲೇಟರ್‌ನಲ್ಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಕಂಡುಬಂದ ಮೊದಲ ಎರಡು ಪ್ರಕರಣ ಇದಾಗಿದೆ.

ಇನ್ನೊಂದೆಡೆ ಕರಾವಳಿಯಲ್ಲಿ ಬ್ಲ್ಯಾಕ್‌ ಫಂಗಸ್‌ ರೋಗಕ್ಕೆ ತುತ್ತಾದ ರೋಗಿಗಳಿಗೆ ಚಿಕಿತ್ಸಾ ಔಷಧ ಕೊರತೆ ಉಂಟಾಗಿದ್ದು, ಈ ರೋಗಕ್ಕೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಔಷಧ ಲಭ್ಯವಿದೆ. ಆದರೆ ಇದೀಗ ಖಾಸಗಿ ಆಸ್ಪತ್ರೆಗಳಿಂದಲೂ ಈ ಔಷಧಕ್ಕೆ ಬೇಡಿಕೆ ಕೇಳಿಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!