Saturday, June 28, 2025
spot_imgspot_img
spot_imgspot_img

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ; ಆರೋಪಿ ಖಾಕಿ ಬಲೆಗೆ!

- Advertisement -
- Advertisement -

ಮಂಗಳೂರು: ಎರಡು ವರ್ಷದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯನ್ನು ಮಂಗಳೂರು ನಗರದ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಹಾರ ಮೂಲದ ಚಂದನ್(38) ಎನ್ನಲಾಗಿದೆ.

ಘಟನೆಯ ವಿವರ:

ನಿನ್ನೆ ಸಂಜೆ ವೇಳೆಗೆ ಆರೋಪಿ ಚಂದನ್ ಮಗುವನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ, ಉಪ್ಪು ನೀರಿನ ಟ್ಯಾಂಕ್​ಗೆ ಬಿಸಾಡಿ ಹೋಗಿದ್ದ ಎಂದು ತಿಳಿದು ಬಂದಿದೆ. ಮಗುವನ್ನು ಪೋಷಕರು ಹುಡುಕಿದಾಗ ಟ್ಯಾಂಕ್ ಒಳಗೆ ಇರುವುದು ಪತ್ತೆಯಾಗಿದೆ. ಕೂಡಲೇ ಗಂಭೀರವಾಗಿ ಅಸ್ವಸ್ಥವಾಗಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಈಗ ಮಗುವಿನ‌ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಆರೋಪಿ ಚಂದನ್ ನನ್ನು ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!