Sunday, June 29, 2025
spot_imgspot_img
spot_imgspot_img

ಮಂಗಳೂರು: ನಾಲ್ಕು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ; ಆರೋಪಿಯ ವಿರುದ್ಧ ಪೊಕ್ಸೊ ಕಾಯ್ದೆ ದಾಖಲು

- Advertisement -
- Advertisement -

ಮಂಗಳೂರು: ನಾಲ್ಕು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿದೆ.

driving

ನಾಲ್ಕು ವರ್ಷದ ಮಗುವಿಗೆ ಪಂಜಿಮೊಗರಿನ ರಾಯಿಕಟ್ಟೆ ನಿವಾಸಿ ಗಣೇಶ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು‌ ದೂರಲಾಗಿದೆ. ಆರೋಪಿಯು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ತನ್ನ ಮನೆ ಮಾಲೀಕರ ನಾಲ್ಕು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಮಗು ಪೋಷಕರಲ್ಲಿ ತಿಳಿಸಿದೆ ಎನ್ನಲಾಗಿದೆ. ಕೂಡಲೇ ಹೆತ್ತವರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು‌ ತಿಳಿದುಬಂದಿದೆ.

- Advertisement -

Related news

error: Content is protected !!