Saturday, August 8, 2026
spot_imgspot_img
spot_imgspot_img

ಮಂಗಳೂರು: ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರು: ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದೆ.ಬಂಧಿತ ಆರೋಪಿಯನ್ನು ಶಮೀರ್ ಪಿ.ಕೆ (42) ಎಂದು ಗುರುತಿಸಲಾಗಿದೆ. ಆತನನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ವಶಕ್ಕೆ ಪಡೆಯಲಾಗಿದೆ. ಆತನಿಂದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಕಾರು, ಮೊಬೈಲ್ ಫೋನ್ ಸೇರಿದಂತೆ ಒಟ್ಟು 80 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.

ಪೊಲೀಸರ ಪ್ರಕಾರ, ಶಮೀರ್ ವಿದೇಶದಿಂದ ಹೈಡ್ರೋವಿಡ್ ಗಾಂಜಾವನ್ನು ತರಿಸಿ, ಅದನ್ನು ಕೇರಳ ಮತ್ತು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ. ಈ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.

- Advertisement -

Related news

error: Content is protected !!