Saturday, July 25, 2026
spot_imgspot_img
spot_imgspot_img

ಮಂಗಳೂರು: ರಸ್ತೆ ಅಪಘಾತ ತಡೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾ ಅಳವಡಿಕೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮೊದಲ ಹಂತದಲ್ಲಿ ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ವಿಟ್ಲ, ಉಪ್ಪಿನಂಗಡಿ, ಸುಳ್ಯ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಈ ಕ್ಯಾಮರಾಗಳು ಜುಲೈ 23 ರಿಂದ ಕಾರ್ಯಾರಂಭಗೊಂಡಿದ್ದು, ಕ್ಯಾಮರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚಲಾಗುತ್ತದೆ.

ಹೊಸದಾಗಿ ಅಳವಡಿಸಲಾದ ಈ ಕ್ಯಾಮೆರಾಗಳ ಮೂಲಕ, ಪೊಲೀಸರು ಸಂಚಾರ ನಿಯಮ ಉಲ್ಲಂಘನೆಯನ್ನು ಸೂಕ್ಷ್ಮವಾಗಿ ಗಮನಿಸಿ ಪತ್ತೆ ಮಾಡಲಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ನೋಂದಾಯಿತ ಮಾಲೀಕರಿಗೆ ನೇರವಾಗಿ ಅಧಿಕೃತ ನೋಟಿಸ್ ನೀಡಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!