Friday, July 30, 2021
spot_imgspot_img
spot_imgspot_img

ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ!

- Advertisement -
- Advertisement -

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಆರೋಪಿಯು ಮುತ್ತೂರು ಗ್ರಾಮದ ಮನೋಲಿ ಗದ್ದೆ ಎಂಬಲ್ಲಿ ಕೊಳವೂರು ಗ್ರಾಮದ ಹರೀಶ್ ಆಚಾರಿ ಎಂಬಾತ 2013ರ ಜನವರಿಯಲ್ಲಿ ಮನೆಯ ಹೆಂಚನ್ನು ತೆಗೆದು ಒಳ ಪ್ರವೇಶಿಸಿ ಕಳ್ಳತನ ಮಾಡಲು ಯತ್ನಿಸಿದ್ದು, ಮನೆಯವರ ಕಿರುಚಾಟ ಕೇಳಿ ಆರೋಪಿ ತಪ್ಪಿಸಿಕೊಂಡಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಕಳ್ಳತನ ಯತ್ನ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದ ಈತ ಸತತ 7 ವರ್ಷದಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದರು. ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಪೊಲೀಸ್ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

- Advertisement -
- Advertisement -

MOST POPULAR

HOT NEWS

Related news

error: Content is protected !!