Monday, April 29, 2024
spot_imgspot_img
spot_imgspot_img

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಜನರಿಗೆ ಕೊರೊನಾ ಪಾಸಿಟಿವ್‌..!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ತಪಾಸಣೆ ಹೆಚ್ಚುತ್ತಿದ್ದಂತೆ ಪಾಸಿಟಿವ್‌ ಪ್ರಮಾಣ ಕೂಡ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 341 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು, 8 ಮಂದಿಗೆ ಕೋವಿಡ್‌ ದೃಢ ಪಟ್ಟಿದೆ.

ಇದರಲ್ಲಿ ಮಂಗಳೂರಿನ ನಾಲ್ವರು, ಬಂಟ್ವಾಳದ ಮೂವರು ಮತ್ತು ಬೆಳ್ತಂಗಡಿ ಮೂಲದ ಒಬ್ಬರಿದ್ದಾರೆ. ಒಬ್ಬರು ಐಸಿಯುನಲ್ಲಿ, 6 ಮಂದಿ ಗೃಹ ನಿಗಾವಣೆಯಲ್ಲಿ ಮತ್ತು ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೆಲವು ದಿನಗಳಿಂದ ಜಿಲ್ಲೆಯಲ್ಲಿ ರಾಜ್ಯ ಸರಕಾರ ನೀಡಿದ ಗುರಿಯಂತೆ ಪರೀಕ್ಷೆಗಳು ನಡೆಯುತ್ತಿದ್ದು. ಡಿ. 26 ರಂದು 392, ಡಿ. 27 ರಂದು 335 ಮತ್ತು ಡಿ. 28 ರಂದು 341 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಕೇರಳದಲ್ಲಿ ಕೋವಿಡ್‌ ರೂಪಾಂತರಿ ಜೆಎನ್‌.1 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ವಿಶೇಷ ನಿಗಾ ಇರಿಸಲಾಗಿದ್ದು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನೆಲೆ ಊರಿಗೆ ತೆರಳಿ ಜಿಲ್ಲೆಗೆ ಮರಳುತ್ತಿರುವ ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಆರೊಗ್ಯ ಇಲಾಖೆ ನಿಗಾ ಇರಿಸಿದೆ. ಈಗಾಗಲೇ ವಿವಿಧ ಇಲಾಖೆಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಲ್ಲಿ ಕೋವಿಡ್‌ ಲಕ್ಷಣ ಕಂಡು ಬಂದರೆ ಅವರನ್ನು ಪ್ರತ್ಯೇಕಿಸಿ, ಆರೋಗ್ಯ ಇಲಾಖೆ ಗಮನಕ್ಕೆ ತರಬೇಕು ಮತ್ತು ಕೋವಿಡ್‌ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ಜಿ.ಪಂ. ಸಿಇಒ ಅವರ ಅಧ್ಯಕ್ಷತೆಯಲ್ಲಿ ವೈದ್ಯಕೀಯ ವಿದ್ಯಾಲಯಗಳ ಪ್ರಮುಖರ ಸಭೆ ನಡೆಸಿದ್ದು, ಅಲ್ಲಿಯೂ ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!