Monday, April 29, 2024
spot_imgspot_img
spot_imgspot_img

ಮಂಗಳೂರು : ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ

- Advertisement -G L Acharya panikkar
- Advertisement -

ಮಂಗಳೂರು : ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದ ಘಟನೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

ಪ್ರಯಾಣಿಕರ ಸಹಿತ ಬೆಳಗ್ಗೆ 8:30ಕ್ಕೆ ದುಬೈಗೆ ಇಂಡಿಯೋ ವಿಮಾನ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್​ವೇನಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹಕ್ಕಿಯು ವಿಮಾನದ ರೆಕ್ಕೆಗೆ ಡಿಕ್ಕಿ ಹೊಡೆದಿದೆ. ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಕೂಡಲೇ ಪೈಲಟ್​​​ ಎಟಿಸಿಗೆ ಮಾಹಿತಿ ರವಾನಿಸಿದ್ದಾರೆ. ಕೂಡಲೇ ಟೇಕಾಫ್​ ಕ್ಯಾನ್ಸಲ್​ ಮಾಡಿ ರನ್​ ವೇನಿಂದ ವಿಮಾನ ವಾಪಸ್​ ಬಂದಿದೆ.

ಪ್ರಯಾಣಿಕರನ್ನು ಇಳಿಸಿ ವಿಮಾನದ ತಪಾಸಣೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ಮತ್ತೊಂದು ವಿಮಾನದಲ್ಲಿ ಪ್ರಯಾಣಿಕರನ್ನು ದುಬೈಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಈ ಘಟನೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು.

- Advertisement -

Related news

error: Content is protected !!