Sunday, May 5, 2024
spot_imgspot_img
spot_imgspot_img

ಮಂಗಳೂರು: ಸಿಡಿಲು ಬಡಿದು ದಿನಸಿ ಅಂಗಡಿ ಸುಟ್ಟು ಭಸ್ಮ; ಲಕ್ಷಾಂತರ ರೂ. ನಷ್ಟ..!!

- Advertisement -G L Acharya panikkar
- Advertisement -

ಮಂಗಳೂರು: ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ.

ರಾಣಿಪುರ ಚರ್ಚ್ ಎದುರಿನ ಪೀಟರ್ ಆಪ್ರೋಸ್ ಎಂಬುವವರ ದಿನಸಿ ಅಂಗಡಿಗೆ ಸಿಡಿಲು ಬಡಿದಿದೆ. ಘಟನೆ ವೇಳೆ ಪೀಟರ್ ಮತ್ತು ಮನೆಯವರು ನಿದ್ರೆಯಲ್ಲಿದ್ದರು.

ದಾರಿ ಹೋಕರೊಬ್ಬರು ಅಂಗಡಿಗೆ ಬೆಂಕಿ ಬಿದ್ದಿರುವುದನ್ನ ಕಂಡು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.

ಈ ಘಟನೆಯಿಂದ ಮೂರು ರೆಫ್ರಿಜರೇಟರ್ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ದಾಸ್ತಾನು ಸುಟ್ಟು ಕರಕಲಾಗಿದೆ. ಇತರ ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ, ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!