Monday, June 22, 2026
spot_imgspot_img
spot_imgspot_img

ಮಂಗಳೂರು: ಕೆಲಸಕ್ಕೆ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆ

- Advertisement -
- Advertisement -

ಮಂಗಳೂರು: ಕೆಲಸಕ್ಕೆ ಹೋಗಿ ಬರುವುದಾಗಿ ತೆರಳಿದ್ದ ವಿವಾಹಿತ ಮಹಿಳೆ ನಾಪತ್ತೆಯಾದ ಬಗ್ಗೆ, ಬರ್ಕೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ನಾಪತ್ತೆಯಾದ ಮಹಿಳೆ ನಮಿತಾ ಬಂಗೇರ (29) ಎಂದು ತಿಳಿದು ಬಂದಿದೆ.

6 ವರ್ಷದ ಹಿಂದೆ ನಮಿತಾ ಬಂಗೇರಾಳನ್ನು ಹೆಜಮಾಡಿಯ ಗೌತಮ್ ಎಂಬುವವರೊಂದಿಗೆ ಮದುವೆ ಮಾಡಿಕೊಟ್ಟಿದ್ದು, ಆಕೆಯ ಗಂಡ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಮಿತಾ ಟೂರಿಸ್ಟ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು ಜೂ.19ರಂದು ಬೆಳಗ್ಗೆ, ಸಂಬಳ ತರಲು ಕಚೇರಿಗೆ ಹೋಗುವುದಾಗಿ ತಿಳಿಸಿ ಹೋದವರು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುವುದು ತಿಳಿದು ಬಂದಿದೆ. ಬಳಿಕ ನಾಪತ್ತೆಯ ಕುರಿತು ಬರ್ಕೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

5.4 ಅಡಿ ಎತ್ತರ, ಬಿಳಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್, ಹಿಂದಿ ಭಾಷೆ ಮಾತನಾಡುತ್ತಾರೆ. ಗುಲಾಬಿ ಬಣ್ಣದ ಕುರ್ತಾ ಧರಿಸಿದ್ದರು. ಮಾಹಿತಿ ದೊರೆತವರು ಬರ್ಕ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!