Thursday, June 18, 2026
spot_imgspot_img
spot_imgspot_img

ಮಂಗಳೂರು: ಪ್ರತ್ಯೇಕ ಪ್ರಕರಣ; ಆರೋಪಿಗಳಿಬ್ಬರು ಅರೆಸ್ಟ್..!

- Advertisement -
- Advertisement -

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ಹಾಗೂ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಎಂದು ಗುರುತಿಸಲಾಗಿದೆ.

ಬಜಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ದರೋಡೆ ಮಾಡಲು ಸಂಚು ರೂಪಿಸಿದ ಕೇಸಿನಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ಸಮಯ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 62 ನೇ ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ ಮತ್ತು 2021ರಲ್ಲಿ ರಸ್ತೆ ಅಪಘಾತದಲ್ಲಿ ಓರ್ವ ಮೃತರಾಗಿದ್ದು, ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30) ಬಂಧಿತರು.

ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್ ತಂಡ ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!