Sunday, October 6, 2024
spot_imgspot_img
spot_imgspot_img

ಮಂಗಳೂರು: ಬಸ್‌ನಲ್ಲಿ ಪ್ರಾಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಾಣಿಸಿಕೊಂಡ ಎದೆನೋವು

- Advertisement -
- Advertisement -

ಆಂಬುಲೆನ್ಸ್ ಮಾದರಿಯಲ್ಲಿ ಬಸ್ ಚಲಾಯಿಸಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಚಾಲಕ- ನಿರ್ವಾಹಕ

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಈ ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಕಾಲೇಜು ವಿದ್ಯಾರ್ಥಿನಿಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದೆ. ಆಕೆಗೆ ಹೃದಯಾಘಾತವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಗಜೇಂದ್ರ ಕುಂದರ್ ಹಾಗೂ ನಿರ್ವಾಹಕ ಮಹೇಶ್ ಪೂಜಾರಿ ಸುರೇಶ್ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 ಕಿ.ಮೀ ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ನಗರದ ಕಂಕನಾಡಿ ಆಸ್ಪತ್ರೆಯ ಹೊರಗಣವನ್ನು ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿಯನ್ನು ವಾರ್ಡ್ ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ. ಚಾಲಕನ ಹಾಗೂ ನಿರ್ವಾಹಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕರಾವಳಿಯ ಬಸ್ಸು ಚಾಲಕ, ನಿರ್ವಹಕ, ಶ್ರಮಿಕ ವರ್ಗ ಮಾನವೀಯತೆಯ ಸಾಕಾರರು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

- Advertisement -

Related news

error: Content is protected !!